Home » ಸಾರ್ವಜನಿಕರೇ ಗಮನಿಸಿ | ಮುಂದಿನ 24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಸಾರ್ವಜನಿಕರೇ ಗಮನಿಸಿ | ಮುಂದಿನ 24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

by Mallika
0 comments

ಎಲ್ಲೆಡೆ ಭಾರೀ ಬಿರುಸಿನ ಮಳೆಯಾಗುತ್ತಲಿದೆ. ಎಲ್ಲೆಡೆ ಜನ ಮಳೆ, ಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆಯೊಂದು ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನೆಂದರೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ ಮಳೆಯಾಗಲಿದೆ.

ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಮಳೆ ಹೆಚ್ಚಾಗಲಿದೆ.

ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

You may also like

Leave a Comment