Home » Mangaluru: ಹಾಸ್ಟೆಲ್ ನ 6 ನೇ ಮಹಡಿಯಿಂದ ಹಾರಿ MBBS ವಿದ್ಯಾರ್ಥಿನಿ ಆತ್ಮಹತ್ಯೆ!!

Mangaluru: ಹಾಸ್ಟೆಲ್ ನ 6 ನೇ ಮಹಡಿಯಿಂದ ಹಾರಿ MBBS ವಿದ್ಯಾರ್ಥಿನಿ ಆತ್ಮಹತ್ಯೆ!!

1 comment
MBBS student commits suicide

Mangaluru MBBS student commits suicide: ಮಂಗಳೂರಿನ ಖ್ಯಾತ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮಹಡಿಯಿಂದ ಹಾರಿ, ಮೊದಲ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಪ್ರಕೃತಿ ಶೆಟ್ಟಿ (20) ಎಂಬಾಕೆ ಆತ್ಮಹತ್ಯೆ ( Mangaluru MBBS student commits suicide) ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ತಡರಾತ್ರಿ ಮೂರು ಗಂಟೆ ವೇಳೆಗೆ ನಡೆದಿದೆ.

ಮಾಹಿತಿ ಪ್ರಕಾರ, ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ, ದಪ್ಪಗಿದ್ದೇನೆ ಎಂದು ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಲ್ಲಿದ್ದಳು. ಇದೇ ಚಿಂತೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಮೃತ ವಿದ್ಯಾರ್ಥಿನಿ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನೆಲೆಸಿದ್ದು ಪ್ರಕೃತಿ ಶೆಟ್ಟಿ ಹಾಸ್ಟೆಲ್​​​ನಲ್ಲಿ ವಾಸಿವಿದ್ದು ಓದುತ್ತಿದ್ದರು. ತಾಯಿ ಕಾರ್ಕಳ ಮೂಲದವರಾಗಿದ್ದು ಡಾಕ್ಟರ್ ಕಲಿಯಬೇಕೆಂಬ ಕನಸಿನಲ್ಲಿ ಪುತ್ರಿಯನ್ನು ಪ್ರತಿಷ್ಠಿತ ಎಜೆ ಮೆಡಿಕಲ್ ಕಾಲೇಜಿಗೆ ಸೇರಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಶಿಕ್ಷಕರಾಗೋ ಕನಸು ಕಂಡವರಿಗೆ ಭರ್ಜರಿ ಸುದ್ದಿ- ಹಬ್ಬದ ದಿನವೇ ಸಚಿವರಿಂದ ಹೊಸ ಘೋಷಣೆ!!

You may also like

Leave a Comment