Home » Mangaluru university college : ವಿವಾದದಕ್ಕೂ, ವಿರೋಧಕ್ಕೂ ಸೊಪ್ಪು ಹಾಕದ ವಿವಿ ಕಾಲೇಜು !! ಹಿಂದೂ ಮುಖಂಡನ ಆತಿಥ್ಯದಲ್ಲೇ ಜರುಗಿದ ಕಾರ್ಯಕ್ರಮ !!

Mangaluru university college : ವಿವಾದದಕ್ಕೂ, ವಿರೋಧಕ್ಕೂ ಸೊಪ್ಪು ಹಾಕದ ವಿವಿ ಕಾಲೇಜು !! ಹಿಂದೂ ಮುಖಂಡನ ಆತಿಥ್ಯದಲ್ಲೇ ಜರುಗಿದ ಕಾರ್ಯಕ್ರಮ !!

by ಹೊಸಕನ್ನಡ
0 comments
Mangaluru University College

Mangaluru University College: ಹಿಜಾಬ್(Hijab) ವಿವಾದ ಭುಗಿಲೆದ್ದ ಮಂಗಳೂರಿನ ವಿವಿ ಕಾಲೇಜಿನಲ್ಲಿ(Mangaluru University College) ಇತ್ತೀಚೆಗೆ ಮತ್ತೊಂದು ವಿವಾದ ಹುಟ್ಟಿಕೊಂಡಿದ್ದು, ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯ ನೀಡಿದ್ದಕ್ಕೆ ಅಪಸ್ವರ ಕೇಳಿಬಂದಿತ್ತು. ಈ ಕುರಿತು ಭಾರೀ ವಿರೋದ ವ್ಯಕ್ತವಾಗಿತ್ತು. ಆದರೀಗ ವಿರೋಧದ ನಡುವೆಯೂ ಕಾಲೇಜು ಕಾರ್ಯಕ್ರಮದಲ್ಲಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ(Shreekanth shetty karkala) ಭಾಗಿಯಾಗಿ ಕಾರ್ಯಕ್ರಮ ಶಾಂತಿಯುತವಾಗಿ ಮುಗಿದಿದೆ.

ಹೌದು, ಹಿಜಾಬ್ ವಿವಾದ ಭುಗಿಲೆದ್ದಿದ್ದ ಮಂಗಳೂರಿನ ವಿವಿ ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯ ನೀಡಿದ್ದರ ಬಗ್ಗೆ ಅಪಸ್ವರ ಕೇಳಿಬಂದರೂ ಎಬಿವಿಪಿ(ABVP) ನೇತೃತ್ವದ ಕಾಲೇಜು ವಿದ್ಯಾರ್ಥಿ ಸಂಘ ಹಿಂದೂ ಮುಖಂಡನನ್ನು ಕಾರ್ಯಕ್ರಮಕ್ಕೆ ಕರೆ ತಂದಿದೆ. ಇಂದು ಕಾಲೇಜು ಕಾರ್ಯಕ್ರಮದಲ್ಲಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಭಾಗಿಯಾಗಿದ್ದಾರೆ‌. ಈ ಮೂಲಕ ಕೊನೆಗೂ ವಿವಿ ಕಾಲೇಜಿನ(University collage) ಕಾರ್ಯಕ್ರಮವು ಅಂದುಕೊಂಡಂತೆ ನಡೆದಿದೆ.

ಅಂದಹಾಗೆ ಮಂಗಳೂರಿನ ಹಂಪನಕಟ್ಟೆಯ(Hampanakatte) ವಿವಿ ಕಾಲೇಜಿನಲ್ಲಿ ಜೂ.23ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಎಬಿವಿಪಿ(ABVP) ನೇತೃತ್ವದ ವಿದ್ಯಾರ್ಥಿ ಸಂಘದಿಂದ ಹಿಂದೂ ಸಂಘಟನೆ ಮುಖಂಡ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಕಾಲೇಜು ಕಾರ್ಯಕ್ರಮದಲ್ಲಿ ಹಿಂದು ಮುಖಂಡನಿಗೆ ನೀಡಿದ್ದಕ್ಕೆ ಎನ್ಎಸ್ ಯುಐ(NSUI) ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎಬಿವಿಪಿಗೆ ಎಚ್ಚರಿಕೆ ನೀಡಿತ್ತು. ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಕಾಲೇಜು ಆಡಳಿತವು ಈ ಎರಡೂ ಕಾರ್ಯಕ್ರಮಗಳನ್ನು ಮುಂದೂಡಿತ್ತು. ಅಲ್ಲದೆ, ನಗರ ಪೊಲೀಸ್‌ ಆಯುಕ್ತರಿಗೂ ದೂರು ನೀಡಿತ್ತು.

ಕಾಲೇಜಿನಲ್ಲಿ ಕಾರ್ಯಕ್ರಮ ಮುಂದೂಡಿದರೂ ಕೂಡ ನಿನ್ನೆ ದಿನ ಮತ್ತೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ(Talents day)ಕಾರ್ಯಕ್ರಮ ನಡೆದಿದ್ದು, ಅತಿಥಿಯಾಗಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗಿಯಾಗಿದ್ದಾರೆ. ಪ್ರತಿಭಟನೆ ಎಚ್ಚರಿಕೆ ನೀಡಿದ್ದ ಎನ್ಎಸ್ ಯುಐ ಮುಖಂಡರು ಪೊಲೀಸರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟಿದ್ದಾರೆ‌.ಯಾವುದೇ ಅಹಿತಕರ ಘಟನೆ ನಡೆಯದೇ ಶಾಂತಿಯುತವಾಗಿ ಕಾರ್ಯಕ್ರಮ ಮುಕ್ತಾಯವಾಗಿದೆ‌. ಅಲ್ಲದೆ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿ ಕೋಮು ಪ್ರಚೋದನೆ ಭಾಷಣ ಮಾಡಿದಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಅದರೆ ಕೊನೆಗೂ ಹಿಂದೂ ಮುಖಂಡ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮ ಸಂಪನ್ನಗೊಂಡಿದೆ.

ಇದನ್ನೂ ಓದಿ: Gruha jyothi Scheme: 200 ಯುನಿಟ್ ಕರೆಂಟ್ ಬಗ್ಗೆ ಬಿಗ್ ಅಪ್ಡೇಟ್!! ‘ಗೃಹಜ್ಯೋತಿ’ ಫಲಾನುಭವಿಗಳಿಗಿದು ಗುಡ್ ನ್ಯೂಸ್!!

You may also like

Leave a Comment