8


ಮಂಗಳೂರು: ಇಲ್ಲಿನ ನಂತೂರು ಸರ್ಕಲ್ ಬಳಿ ಬೈಕ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಏಪ್ರಿಲ್ 29ರ ಮಧ್ಯಾಹ್ನ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರನ ದೇಹ ಸಂಪೂರ್ಣ ಅಪ್ಪಚ್ಚಿಯಾಗಿದ್ದು ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೈಕ್ ಹೆದ್ದಾರಿ ಬದಿಯ ಡಿವೈಡರ್ ಗೆ ಗುದ್ದಿ ಅಲ್ಲೇ ಸಂಚರಿಸುತ್ತಿದ್ದ ಟ್ಯಾಂಕರ್ ಒಂದರ ಟೈರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
