Home » ದ.ಕ.ಖಾಲಿಯಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ನೇಮಕಾತಿಗೆ ಸಂಸದ ನಳಿನ್‌ ಸೂಚನೆ | ಆರೋಗ್ಯ ಸಚಿವ ಡಾ. ಕೆ.ಸುಧಾಕರ ಅವರಿಂದ ಸಕಾರಾತ್ಮಕ ಸ್ಪಂದನೆ

ದ.ಕ.ಖಾಲಿಯಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ನೇಮಕಾತಿಗೆ ಸಂಸದ ನಳಿನ್‌ ಸೂಚನೆ | ಆರೋಗ್ಯ ಸಚಿವ ಡಾ. ಕೆ.ಸುಧಾಕರ ಅವರಿಂದ ಸಕಾರಾತ್ಮಕ ಸ್ಪಂದನೆ

by Praveen Chennavara
0 comments

ಸವಣೂರು : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 144 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎ.ಎನ್.ಎಂ.) ಹುದ್ದೆಗೆ ನೇಮಕಾತಿ ನಡೆಸುವಂತೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ ಸೂಚನೆ ನೀಡಿದರು.
ಅವರು ಎ.ಎನ್.ಎಂ. ತರಬೇತಿ ಪಡೆದು ಕೋವಿಡ್‌ ವಾರಿಯರ್ಸ್‌ ಆಗಿ ಕರ್ತವ್ಯ ನಿರ್ವಹಿಸಿದ್ದ ಅಭ್ಯರ್ಥಿಗಳಿಂದ ಮನವಿ ಸ್ವೀಕರಿಸಿ, ಜಿಲ್ಲಾ ಆರೋಗ್ಯಾಧಿಕಾರಿಯವರಿಂದ ಮಾಹಿತಿ ಪಡೆದು ಆರೋಗ್ಯ ಸಚಿವ ಡಾ.ಸುಧಾಕರ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದರು.
ನಳಿನ್‌ ಕುಮಾರ್‌ ಅವರ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆರೋಗ್ಯ ಸಚಿವ ಡಾ.ಸುಧಾಕರ ಅವರು ಕೂಡಲೇ ನೇಮಕಾತಿ ಕುರಿತಂತೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

You may also like

Leave a Comment