Home » ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಗಣೇಶ್ ಸಾರಡ್ಕ ಹೃದಯಾಘಾತದಿಂದ ನಿಧನ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಗಣೇಶ್ ಸಾರಡ್ಕ ಹೃದಯಾಘಾತದಿಂದ ನಿಧನ

by Praveen Chennavara
0 comments

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಗಣೇಶ್ ಸಾರಡ್ಕ (42) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಸ್ವರ್ಗ ಚೆಕ್ ಪೋಸ್ಟ್‌ಗೆ ಕರ್ತವ್ಯಕ್ಕೆ ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಹೃದಯಾಘಾತವಾಗಿದೆ.

ಆರೋಗ್ಯದಲ್ಲಿ ಏರುಪೇರಾದಗ ನೆರೆಹೊರೆಯ ಮನೆಯಯವರು ಕಂಡು ತಕ್ಷಣ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ಗಣೇಶ್ ಎಣ್ಮಕಜೆ ಗ್ರಾಮದ ಪೆಲತ್ತಡ್ಕ ನಿವಾಸಿ. ಇವರ ಪತ್ನಿ ಮೈಸೂರಿನಲ್ಲಿ ರೈಲ್ವೇ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಮೃತರು ಹೆಂಡತಿ, ಒಂದು ಗಂಡು ಮಗು, ತಾಯಿಯನ್ನು ಅಗಲಿದ್ದಾರೆ.

You may also like

Leave a Comment