Home » ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಗಳ ಬಂಧನ : ಪೊಲೀಸ್ ಇಲಾಖೆಗೆ ನಳಿನ್ ಕೃತಜ್ಞತೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಗಳ ಬಂಧನ : ಪೊಲೀಸ್ ಇಲಾಖೆಗೆ ನಳಿನ್ ಕೃತಜ್ಞತೆ

by Praveen Chennavara
0 comments

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಪ್ರಮುಖ ಆರೋಪಿಗಳನ್ನು ಬಂಧಿಸಿದ ಕರ್ನಾಟಕ ಪೊಲೀಸ್ ಇಲಾಖೆಗೆ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.

ನೈಜ ಆರೋಪಿಗಳಿಗೆ ಶಿಕ್ಷೆಯಾಗಲು ಶ್ರಮಿಸುತ್ತಿರುವ ಆರಕ್ಷಕ ಬಂಧುಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಸರ್ವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಅಲ್ಲದೆ ಕೊಲೆಪ್ರಕರಣಗಳ ನೈಜ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆಗೆ ಬಹುಮಾನ ನೀಡಲು ದ.ಕ.ಸಂಸದನಾಗಿ ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದಾರೆ.

You may also like

Leave a Comment