Home » Puttur: ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ!

Puttur: ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ!

0 comments
Puttur

Puttur: ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹೌದು, ಕಬಕ- ಪುತ್ತೂರು(Puttur) ರೈಲ್ವೇ ನಿಲ್ದಾಣದ ಮುರ ಎಂಬಲ್ಲಿ ಜೂ. 1 ರಂದು ಛತ್ತೀಸ್‌ಗಢದ ಮನಮೋಹನದಾಸ್ (24) ಎಂಬಾತ ಆತ್ಮಹತ್ಯೆ ಮಾಡಿಕೊಂದಿರುವುದಾಗಿದೆ.

ಇದನ್ನೂ ಓದಿ: ಕರ್ನಾಟಕ ಫಲಿತಾಂಶದ ಬಗ್ಗೆ ಹೊಸ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಸಮೀಕ್ಷೆಗಳು; ಹೆಚ್ಚು ಗೆಲುವು ಕಾಂಗ್ರೆಸ್ ಗೋ ಇಲ್ಲಾ ಮೈತ್ರೀಗೋ?

ಮನಮೋಹನದಾಸ್ ಎಂಬಾತ ಪ್ರೇಮ ವೈಫಲ್ಯಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈತ ಛತ್ತೀಸ್‌ಗಢದ ಯುವತಿಯನ್ನು ಪ್ರೀತಿಸುತ್ತಿದ್ದು, ಅವರಿಬ್ಬರ ಮಧ್ಯೆ ವಿರಸ ಉಂಟಾಗಿದ್ದು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪ್ರೇಯಸಿಯ ದೂರವಾಣಿಗೆ ಸಂದೇಶ ಕಳುಹಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಮಾಹಿತಿ ಪ್ರಕಾರ, ಕಾಸರಗೋಡಿನಲ್ಲಿ ಕೆಲಸ ಮಾಡು ತ್ತಿದ್ದ ಈತ ಒಂದು ತಿಂಗಳ ಹಿಂದೆ ಯಷ್ಟೇ ಪುತ್ತೂರಿಗೆ ಬಂದು, ಕಳೆದ ಒಂದು ತಿಂಗಳಿನಿಂದ ಪುತ್ತೂರಿನಲ್ಲಿ ಎಳನೀರು ಕೀಳುವ ಕೆಲಸ ಮಾಡಿಕೊಂಡಿದ್ದು, ಮೇ 30ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: “ನಾನು ಜೀವನ ಪರ್ಯಂತ ಹೀಗೆ ಬರಿಗಾಲಿನಲ್ಲಿ ಇರಲು ಸಂಕಲ್ಪ ಮಾಡಿದ್ದೇನೆ” ಖ್ಯಾತ ನಟನ ಈ ನಿರ್ಧಾರಕ್ಕೆ ಕಾರಣವೂ ಇದೆ! 

You may also like

Leave a Comment