Puttur : ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ (Puttur news).
ಅಬ್ದುಲ್ ನಾಸಿರ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ವೀಡಿಯೋ ಮಾಡಿ , ತಾನು ಚಾಲಕ ವೃತ್ತಿ ಮಾಡುತ್ತಿದ್ದು, ಬೆಳ್ಳಾರೆ ಸಮೀಪ ಮಾಲಕರು ತನಗೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋ ಮಾಡಿದ್ದು,ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಷಯ ತಿಳಿದು ಅಬ್ದುಲ್ ನಾಸಿರ್ ಅವರನ್ನು ತತ್ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಬಂಟ್ವಾಳ : ಮೊಡಂಕಾಪುನಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣಾ ಶಿಬಿರ
