Home » Puttur : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಅವರ ಪತ್ನಿಯ ಮೃತದೇಹ ತೊಟ್ಟಿಯಲ್ಲಿ ಪತ್ತೆ!!

Puttur : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಅವರ ಪತ್ನಿಯ ಮೃತದೇಹ ತೊಟ್ಟಿಯಲ್ಲಿ ಪತ್ತೆ!!

0 comments

Puttur: ತೋಟದ ನೀರಿನ ತೊಟ್ಟಿಯಲ್ಲಿ ಮಹಿಳೆಯೊಬ್ಬರ ಮೃತದೇಹವೊಂದು ಪತ್ತೆಯಾದ ಘಟನೆಯೊಂದು ಜ.17 ರಂದು ಮಧ್ಯಾಹ್ನ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ.

ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ ಪತ್ನಿ ಶುಭಲಕ್ಷ್ಮೀ ಮೃತ ಮಹಿಳೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರಕಾಶ್‌ ರೈ ಅವರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಆದರೆ ಈ ಸಾವಿನ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಅವರದೇ ಮನೆಯ ಗುಡ್ಡದ ಮೇಲೆ ಟರ್ಪಾಲು ಹಾಕಿ ನಿರ್ಮಿಸಿದ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.

You may also like

Leave a Comment