Home » ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ | ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಹಿಂ.ಜಾ.ವೇ.ಮುತ್ತಿಗೆ

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ | ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಹಿಂ.ಜಾ.ವೇ.ಮುತ್ತಿಗೆ

by Praveen Chennavara
0 comments

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದಾರೆ.

ಮಹಿಳಾ ಠಾಣೆಯಲ್ಲಿ ಕೌನ್ಸಿಲಿಂಗ್:

ಕೊಂಬೆಟ್ಟು ಕಾಲೇಜು ಪರಿಸರದಲ್ಲಿ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಅಪ್ರಾಪ್ತರಾದ ಹಿನ್ನಲೆಯಲ್ಲಿ ಅವರನ್ನು ಪೊಲೀಸ್ ಠಾಣೆಗೆ ಕರೆಸಯವುದು ಸಮಂಜಸವಲ್ಲವೆಂದು ಮಹಿಳಾ ಪೊಲೀಸ್ ಠಾಣೆಯಲ್ಲಿರುವ ಅಪ್ರಾಪ್ತರ ಕೌನ್ಸಿಲಿಂಗ್ ವಿಭಾಗಕ್ಕೆ ನಾಲ್ವರು ಹಿಂದು ಮತ್ತು ಇಬ್ಬರು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳನ್ನು ಘಟನೆಯ ಮಾಹಿತಿ ಪಡೆಯಲು ಕರೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರ ಸುದ್ದಿಯಾಗುತ್ತಲೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಅಪರಾಧ ಎಸಗದ ಹಿಂದು ವಿದ್ಯಾರ್ಥಿಗಳನ್ನು ನೀವು ಠಾಣೆಗೆ ಕರೆದೊಯ್ಯುವುದು ತಪ್ಪು. ಅವರನ್ನು ಬಿಡಬೇಕೆಂದು ಠಾಣೆಯ ಮುಂದೆ ಜಮಾಯಿಸಿ ಒತ್ತಾಯಿಸಿದರು.

You may also like

Leave a Comment