3
Puttur: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕಲ್ಪಣೆ ಎಂಬಲ್ಲಿ ನಡೆದಿದೆ.
ಕಲ್ಪಣೆ ಆನಂದ್ ನಾಯ್ಕ ಎಂಬವರ ಪತ್ನಿ ವಸಂತಿ (45ವ) ಮೃತರು.
ಫೆ.15 ರಂದು ರಾತ್ರಿ ಮನೆಯಲ್ಲಿ ಜಗಳ ನಡೆದಿದ್ದು, ಇಂದು ಮುಂಜಾನೆ ವಸಂತಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
