Home » ಸುಬ್ರಹ್ಮಣ್ಯ: ಕುಮಾರಧಾರ ನದಿ ತಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರ ನದಿ ತಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

0 comments

ಸುಬ್ರಮಣ್ಯ :ಕುಮಾರಧಾರ ನದಿ ತಟದಲ್ಲಿ ಇಂದು ಅಪರಿಚಿತ ಮಹಿಳೆಯೋರ್ವರ ಶವ ಪತ್ತೆಯಾದ ಘಟನೆ ನಡೆದಿದೆ.

ಘಟನೆಯ ಕುರಿತು ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ನದಿಯಿಂದ ಶವವನ್ನು ಮೇಲಕ್ಕೆತ್ತಿದ್ದಾರೆ. ಸಮಾಜಸೇವಕ ರವಿ ಕಕ್ಕೆಪದವು, ಹರೀಶ ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕರಿಸಿದ್ದಾರೆ.ಆದರೆ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.ಈ ಮಹಿಳೆಯ ಗುರುತು ಪತ್ತೆಯಾದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಸಂಪರ್ಕಿಸಲು ಪೊಲೀಸ್ ಇಲಾಖೆ ತಿಳಿಸಿದೆ.

You may also like

Leave a Comment