Home » ಸುಳ್ಯ: ಕಾಳುಮೆಣಸು ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ ಏಣಿ, ಕೃಷಿಕ ಸ್ಥಳದಲ್ಲೇ ಸಾವು

ಸುಳ್ಯ: ಕಾಳುಮೆಣಸು ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ ಏಣಿ, ಕೃಷಿಕ ಸ್ಥಳದಲ್ಲೇ ಸಾವು

0 comments

ತಮ್ಮ ತೋಟದಲ್ಲಿ ಕಾಳುಮೆಣಸು ಕೊಯ್ಯಲು ಬಳಸಿದ್ದ ಏಣಿ ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸುಳ್ಯ ತಾಲೂಕು ಚೆಂಬು ಗ್ರಾಮದ ದಾಸಪ್ಪ ಎಂದು ಗುರುತಿಸಲಾಗಿದೆ.

ಇವರು ತಮ್ಮ ತೋಟದಲ್ಲಿ ಏಣಿಯ ಸಹಾಯದಿಂದ ಕಾಳುಮೆಣಸು ಕೊಯ್ಯುತ್ತಿದ್ದಾಗ, ಏಣಿಯು ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ತಾಗಿದೆ. ಕೂಡಲೇ ವಿದ್ಯುತ್ ಶಾಕ್ ಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

You may also like

Leave a Comment