Home » Bengaluru School Holiday:ನಾಳೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದ್ಯೋ, ಇಲ್ವೋ ?! ಇಲ್ಲಿದೆ ಮಾಹಿತಿ

Bengaluru School Holiday:ನಾಳೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದ್ಯೋ, ಇಲ್ವೋ ?! ಇಲ್ಲಿದೆ ಮಾಹಿತಿ

12 comments
Bengaluru School Holiday

Bengaluru School Holiday: ಬೆಂಗಳೂರು ನಗರದ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ(Bomb Threat)ಸಂದೇಶ ಬಂದ ಹಿನ್ನಲೆಯಲ್ಲಿ ಇಂದು ಕೆಲವು ಶಾಲೆಗಳಿಗೆ ರಜೆ ಘೋಷಣೆ(Bengaluru School Holiday)ಮಾಡಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಗಾಬರಿಗೊಂಡಿದ್ದು, ಕೂಡಲೇ ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದ ಘಟನೆಗಳು ನಡೆದಿವೆ.

ಬೆಂಗಳೂರಿನ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂಬ ಮಾಹಿತಿ ತಿಳಿದ ಬಳಿಕ ಪ್ರಕರಣದ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ನಡುವೆ, ನಾಳೆ ಬೆಂಗಳೂರಿನ ಯಾವುದೇ ಶಾಲೆಗಳಿಗೆ ರಜೆಯಿರುವುದಿಲ್ಲ. ಈ ಪ್ರಕರಣ ಅಷ್ಟು ಗಂಭೀರತೆ ಪಡೆದಿಲ್ಲ . ಹೀಗಾಗಿ, ಪೋಷಕರು ಹೆದರುವ ಅವಶ್ಯಕತೆಯಿಲ್ಲ. ಒಂದು ವೇಳೆ, ತುರ್ತು ಅನಿವಾರ್ಯತೆಯ ಪರಿಸ್ಥಿತಿ ಎದುರಾದರೆ ಶಿಕ್ಷಣ ಇಲಾಖೆ ರಜೆ ನೀಡಲಿದೆ ಎಂದು ನಗರ ಜಿಲ್ಲಾಧಿಕಾರಿ ಕೆ. ದಯಾನಂದ್ ಹೇಳಿದ್ದಾರೆ.

ಬೆಂಗಳೂರಿನ ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಕರೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲವೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa)ಹೇಳಿದ್ದಾರೆ. ಈ ರೀತಿ ಬೆದರಿಕೆ ಬಂದಿರುವ ಶಾಲೆಗಳಿಗೆ ಪೂರಕ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು, ಗೃಹ ಸಚಿವರ ಜೊತೆಗೆ ಅದೇ ರೀತಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವ ಕುರಿತು ಸಚಿವರು ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಜೊತೆಯಾಗಿ ಕೆಲಸ ಮಾಡುತ್ತಿದ್ದು, ಮಕ್ಕಳ ಸುರಕ್ಷತೆಗೆ ಮೊದಲ ಪ್ರಾಶಸ್ತ್ಯ ನೀಡಲಾಗುತ್ತದೆ. ಹೀಗಾಗಿ, ಹೆದರುವ ಅಗತ್ಯವಿಲ್ಲ ದೈರ್ಯದಿಂದಿರಿ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನು ಓದಿ: Karnataka Bank Recruitment 2023: ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗವಕಾಶ! ಈ ಕೂಡಲೇ ಅರ್ಜಿ ಸಲ್ಲಿಸಿ, ಮಾಸಿಕ ರೂ.63 ಸಾವಿರ!!!

You may also like

Leave a Comment