Home » ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!!

by Mallika
0 comments

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯ ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022 ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೇಂದ್ರ ಸರ್ಕಾರದ ನೌಕರರಿಗೆ ಸಮನಾಗಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು 7 ನೇ ವೇತನ ಆಯೋಗವನ್ನು ರಚನೆ ಮಾಡಲು ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರಮುಖ ಕಾರಣರು. ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯ ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದರು.

ಈಗಾಗಲೇ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗಾಗಿ ನಗದು ರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

You may also like

Leave a Comment