Home » ಪಿಯು ಪರೀಕ್ಷಾ ನೋಂದಣಿಗೆ ದಿನಾಂಕ ವಿಸ್ತರಣೆ | ಜನವರಿ 31, 2022 ರವರೆಗೆ ಅವಕಾಶ

ಪಿಯು ಪರೀಕ್ಷಾ ನೋಂದಣಿಗೆ ದಿನಾಂಕ ವಿಸ್ತರಣೆ | ಜನವರಿ 31, 2022 ರವರೆಗೆ ಅವಕಾಶ

0 comments

ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಖಾಸಗಿ ವಿದ್ಯಾರ್ಥಿಗಳು ನೋಂದಣಿ ಪಡೆಯಲು ದಿನಾಂಕ ವಿಸ್ತರಣೆ ಮಾಡಿದೆ.

ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಶುಲ್ಕ ಪಾವತಿಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಿಜಿಸ್ಟ್ರೇಶನ್ ಪಡೆದುಕೊಳ್ಳಲು ಜನವರಿ 31, 2022 ರವರೆಗೆ ಅವಕಾಶ ನೀಡಲಾಗಿದೆ.

ಪರೀಕ್ಷೆ ತೆಗೆದುಕೊಳ್ಳಲು ವಿದ್ಯಾರ್ಥಿಗಳು ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಎಸ್ ಎಸ್ ಎಲ್ ಸಿ ಮಾರ್ಕ್ಸ್, ಇತರೆ ದಾಖಲೆಗಳನ್ನು ನೀಡಬೇಕು.ಭರ್ತಿ ಮಾಡಿದ ಅಪ್ಲಿಕೇಶನ್ ಗಳನ್ನು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಲು ಫೆ.04 ಕೊನೆ ದಿನವಾಗಿದೆ.ವಿದ್ಯಾರ್ಥಿಗಳು ದಂಡ ಶುಲ್ಕದೊಂದಿಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

You may also like

Leave a Comment