Home » ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಬೊಮ್ಮಾಯಿ|ರಿಯಾಯಿತಿ ದರದಲ್ಲಿ ಅಪಾರ್ಟ್ ಮೆಂಟ್ ಹಂಚಿಕೆ!

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಬೊಮ್ಮಾಯಿ|ರಿಯಾಯಿತಿ ದರದಲ್ಲಿ ಅಪಾರ್ಟ್ ಮೆಂಟ್ ಹಂಚಿಕೆ!

0 comments

ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕಟ್ಟಿಸುವ ಸರ್ಕಾರಿ ನೌಕರರಿಗೆ ‘ಸಿಎಂ ಬಸವರಾಜ ಬೊಮ್ಮಾಯಿ ‘ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರಿಗೆ ರಿಯಾಯಿತಿ ದರದಲ್ಲಿ ಮನೆ ಹಂಚಿಕೆ ಮಾಡಲು ಸಿಎಂ ಒಪ್ಪಿಗೆ ನೀಡಿದ್ದಾರೆ .

ಬೆಂಗಳೂರು ನಗರದಲ್ಲಿ ಅಪಾರ್ಟ್ ಮೆಂಟ್ ನಿರ್ಮಿಸಿ , ಸರ್ಕಾರಿ ನೌಕರರಿಗೆ ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಒಪ್ಪಿಗೆ ನೀಡಿರುತ್ತಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ತಿಳಿಸಿದ್ದಾರೆ.ಈ ಮೂಲಕ ಬೆಂಗಳೂರು ನಗರದಲ್ಲಿ ಮನೆ ಕಟ್ಟಲು ಕನಸುಹೊಂದಿದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ.

You may also like

Leave a Comment