Bengaluru: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು (Bengaluru) ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವ ಆರೋಪಿ ಬೆಂಗಳೂರು ಮೂಲದ ವ್ಯಕ್ತಿ ಎಂದು ತಿಳಿದುಬಂದಿದೆ.
2025ರ ಡಿಸೆಂಬರ್ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದರ ವಿರುದ್ಧ ಸಿಡಿದ ಅವರು 15 ಇನ್ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು ಸದ್ಯ 15 ಐಡಿಗಳ ಪೈಕಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
